ಹಿಜಾಬ್ ವಿವಾದ: ವಿಭಿನ್ನ ತೀರ್ಪು ನೀಡಿದ ಸುಪ್ರೀಂಕೋರ್ಟ್: ಮುಂದೇನು?

ಹಿಜಾಬ್ ಧರಿಸಿಕೊಂಡು ಹೋಗಬಹುದೇ? ಶಿಕ್ಷಣ ಸಚಿವರು ಹೇಳಿದ್ದೇನು?

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠದ ನ್ಯಾಯಾಧೀಶರಿಂದ ಭಿನ್ನ ತೀರ್ಪು ಬಂದಿದ್ದು, ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಆದರೆ, ಸದ್ಯಕ್ಕೆ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇಲ್ಲವಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ, ಹೆಚ್ಚಿನ ವಿಚಾರಣೆಗಾಗಿ ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.

ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ಯುವತಿ: ನದಿಗೆ ಬಿದ್ದ ಯುವತಿಯನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದರೆ, ಸುಧಾಂಶು ಧುಲಿಯಾ ಅವರು ಹಿಜಾಬ್ ನಿರ್ಬಂಧ ಕುರಿತು ಸರ್ಕಾರದ ಆದೇಶವನ್ನು ವಜಾಗೊಳಿಸಿ ತೀರ್ಪು ನೀಡಿದ್ದಾರೆ. ಧಾರ್ಮಿಕ ಹಕ್ಕು ಮತ್ತು ಆಯ್ಕೆ ಸ್ವಾತಂತ್ರ‍್ಯದ ವಿಷಯದಲ್ಲಿ ಹೈಕೋರ್ಟ್ ತಪ್ಪು ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಜಾಬ್ ಎಂಬುದು ವಿದ್ಯಾರ್ಥಿನಿಯರ ಆಯ್ಕೆ ಪ್ರಶ್ನೆಯಾಗಿದೆ ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದರು. ಆದರೆ ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸುವುದಾಗಿ ಹೇಳಿ ತೀರ್ಪು ನೀಡಿದರು.

ಹಿಜಾಬ್ ಧರಿಸಿಕೊಂಡು ಹೋಗಬಹುದೇ?

ಇತ್ತ ತೀರ್ಪನ್ನು ಸ್ವಾಗತಿಸಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಬ್ಯಾನ್ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ಹೈಕೋರ್ಟ್ ಆದೇಶವನ್ನು ರದ್ದು ಮಾಡದ ಕಾರಣ ಈ ಹಿಂದೆ ನೀಡಿದ ಆದೇಶ ಈಗಲೂ ಜಾರಿಯಲ್ಲಿ ಇರಲಿದೆ. ಇದರ ಪ್ರಕಾರಣ ವಿದ್ಯಾರ್ಥಿಗಳು ಶಾಲೆಗೆ ಹಿಜಬ್ ಧರಿಸಿಕೊಂಡು ಬಂದರೂ ತರಗತಿಯಲ್ಲಿ ಹಿಜಬ್ ತೆಗೆದು ಪಾಠವನ್ನು ಕೇಳಬೇಕಾಗುತ್ತದೆ.

ಮಾರ್ಚ್ 15ರಂದು ಉಡುಪಿಯ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಹಿಜಾಬ್ ಇಸ್ಲಾಮಿನ ಅಗತ್ಯ ಭಾಗವಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಉಡುಪಿ ಸರ್ಕಾರಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಮ್ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version