ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣಕ್ಕೆ ಸಾಗುವ ಕೋರ್ಟ್ ರಸ್ತೆಯಲ್ಲಿ ಭಟ್ಕಳ ಡಿಪೋಗೆ ಸೇರಿದ ಗೇರುಸೊಪ್ಪಾ ದಿಂದ ಹೊನ್ನಾವರ ಆಗಮಿಸುತ್ತಿದ್ದ ಬಸ್ ಬ್ರೇಕ್ ಪೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಎದುರಗಡೆ ಸಾಗುತ್ತಿದ್ದ ಒಂದು ಬೈಕ್ ಮತ್ತು ಪಕ್ಷದಲ್ಲಿ ನಿಂತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಅದರ ಮುಂದೆ ಬಸ್ ನಿಲ್ದಾಣಕ್ಕೆ ಸಾಗುತ್ತಿದ್ದ ಪಣಜಿ ಕಾರವಾರ ಬಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ಯುವತಿ: ನದಿಗೆ ಬಿದ್ದ ಯುವತಿಯನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ
ಪಣಜಿ ಬಸ್ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ ಹಿಂಭಾಗಕ್ಕೂ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ದೊಡ್ಡ ಅನಾಹುತ ತಪ್ಪಿದೆ. ಇಕ್ಕಟ್ಟಾದ ಈ ಸ್ಥಳದಲ್ಲಿ ಹರಸಾಹಸದಿಂದ ಬಸ್ ಸಾಗುತ್ತಿರುವ ಮಧ್ಯೆ ಬ್ರೆಕ್ ಪೇಲ್ ಆಗಿರುವುದರಿಂದ ಈ ಅನಾಹುತ ಸಂಭವಿಸಿದ್ದು, ಪಣಜಿ ಬಸ್ ನಿರ್ವಾಹಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿಸಲಾಗಿದೆ. ಮಹಿಳಾ ಪ್ರಯಾಣಿಕರೊರ್ವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 12 ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಳುಗಳನ್ನು ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗೇರುಸೊಪ್ಪಾ ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ಎಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸಿದ ಬಳಿಕ ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಪರಿಣಾಮ ಟ್ರಾಪಿಕ್ ಸಮಸ್ಯೆ ಉಂಟಾಗಿತ್ತು. ಪೊಲೀಸರು ಸಾರ್ವಜನಿಕರ ಸಹಕಾರದ ಮೇರೆಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಬಸ್ ಬೇರೆ ಮಾರ್ಗದಿಂದ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ನಂತರ ವಾಹನಗಳನ್ನು ತೆರವುಗೋಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ