Important
Trending

ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

ಶಿರಸಿ: ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈರ್ವರಿಗೆ ಗಾಯಗಳಾದ ಘಟನೆ ತಾಲೂಕಿನ ಗಿಡಮಾವಿನಕಟ್ಟೆ ಬಳಿ ನಸುಕಿನ ಜಾವ ನಡೆದಿದೆ. ಶಿರಸಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಿದ್ದಾಪುರ ದಿಂದ ಶಿರಸಿ ಮಾರ್ಗ ವಾಗಿ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕನು ತಿರಾ ನಿಷ್ಕಾಳಜಿ ತನದಿಂದ ಲಾರಿ ಚಲಾಯಿಸಿ ಕೊಂಡು ಬಂದು ಕಾರಿಗೆ ಡಿಕ್ಕಿ ಪಡಿಸಿದ್ದಾನೆ ಎಂದು ತಿಳಿದು ಬಂದಿದೆ.

ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ಯುವತಿ: ನದಿಗೆ ಬಿದ್ದ ಯುವತಿಯನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ರಾಮಕೃಷ್ಣ ಹೆಗಡೆ ಹಾಗೂ ಪ್ರಕಾಶ ದೇವಾಡಿಗ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

hitendra naik

Related Articles

Back to top button