ಅಘನಾಶಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಮಟಾ: ಇಲ್ಲಿನ ಮಣಕಿ ಸಮೀಪದ ಅಘನಾಶಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನದಿಯಲ್ಲಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಮೇಲಕ್ಕೆ ಎತ್ತಿ, ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮೃತ ವ್ಯಕ್ತಿಯ ಅಂದಾಜು ವಯಸ್ಸು 45 ರಿಂದ 50 ವರ್ಷ ಇರಬಹುದೆಂದು ಊಹಿಸಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version