RNS ಕಾಲೇಜಿನಲ್ಲಿ 2022-23ರ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಸ್ಪರ್ಧಾತ್ಮಕ ಕಾರ್ಯಕ್ರಮಕ್ಕೆ ಚಾಲನೆ
ಹೊನ್ನಾವರ: ಆರ್. ಎನ್. ಎಸ್ ಕಾಲೇಜಿನಲ್ಲಿ 2022-23ರ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಸ್ಪರ್ಧಾತ್ಮಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದ ಆರ್. ಎನ್. ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ದಿನೇಶ ಗಾಂವಕರ ರವರು ನಮ್ಮ ಸಾಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳಿಗೆ ಸಂಸ್ಕೃತಿಯ ಅರಿವು ಮೂಡಬೇಕೆಂದರು.
ಅಘನಾಶಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಆರ್. ಎನ್. ಎಸ್ಪಿ.ಯು.ಕಾಲೇಜಿನ ಪ್ರಾಚಾರ್ಯ ಮಾಧವ ಪಿ ,ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಸಂಜಯ್ ಕೆ ಎಸ್ ವಿದ್ಯಾರ್ಥಿಗಳಿಗೆ ಹಾರೈಸಿದರು. ವೇದಿಕೆಯಲ್ಲಿ ಪೆÇ್ರ. ಗಣೇಶ ನಾಯ್ಕ,ಸಾಂಸ್ಕೃತಿಕ ಸಂಚಾಲಕರಾದ ಸೊಫಿಯಾ ಫರ್ನಾಡಿಸ್ ಮತ್ತು ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಉಪನ್ಯಾಸಕ ಗಣಪತಿ ನಾಯ್ಕ ನೆರೆವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಮದರಂಗಿ ಮತ್ತು ಟ್ಯಾಟೊ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿಸ್ಮಯ ನ್ಯೂಸ್, ಹೊನ್ನಾವರ