Join Our

WhatsApp Group
Important
Trending

ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುವ ವೇಳೆ ಸ್ಕಿಡ್ ಆಗಿ ಬಿದ್ದು ಯುವಕ ಸಾವು

ಹಳಿಯಾಳ: ಸ್ನೇಹಿತನೊಂದಿಗೆ ತೆರಳುವ ವೇಳೆ ಪೆಟ್ರೋಲ್ ಬಂಕ್ ಎದುರು ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಪಟ್ಟಣದ ನಾಕೆ ಬಳಿ ನಡೆದಿದೆ.ಉಮೇಶ ಮಾರುತಿ ಕರೆಗಾರ(23) ಮೃತ ಯುವಕ ಎಂದು ತಿಳಿದುಬಂದಿದೆ.ಉಮೇಶ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಯಲ್ಲಾಪೂರ ನಾಕೆ ಸಮೀಪ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ.

ಬೈಕ್ ಸವಾರರ ಬಳಿಕ ಇದೀಗ ಜಾನುವಾರುಗಳ ಮೇಲೆ ಚಿರತೆ ದಾಳಿ: ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ

ಈ ವೇಳೆ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.

ವಿಸ್ಮಯ ನ್ಯೂಸ್ ಕಾರವಾರ

Back to top button