ದಾಂಡೇಲಿ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಪೀಠೋಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಅಂಬೇವಾಡಿಯಲ್ಲಿ ನಡೆದಿದೆ. ತೀವ್ರವಾಗಿ ಬೆಂಕಿ ವ್ಯಾಪಿಸಿದ್ದರಿಂದ ಮಳಿಗೆಯಲ್ಲಿದ್ದ ಬಹುತೇಕ ಪೀಠೋಪಕರಣಗಳು ಸುಟ್ಟು ಹೋಗಿವೆ.
ಬೆಳಗಿನ ಜಾವ ಪೀಠೋಪಕರಣ ಮಳಿಗೆಯಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಬೆಂಕಿಯ ತೀವ್ರತೆ ಜೋರಿದ್ದ ಹಿನ್ನಲೆಯಲ್ಲಿ ಅಕ್ಕಪಕ್ಕದ ಅಂಗಡಿಗೂ ಬೆಂಕಿ ಆವರಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹರಸಾಹಸ ಪಟ್ಟು ನಂದಿಸಿದ್ದಾರೆ. ಅಗ್ನಿದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ