ಉತ್ತರಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆ

ಕಾರವಾರ: ತಮ್ಮ ಉತ್ತಮ,‌ಜನಪರ ಕಾರ್ಯದ ಮೂಲಕ ಉತ್ತರ ಕನ್ನಡ ಜನರ ಮೆಚ್ಚುಗೆ ಗಳಿಸಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ. ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಇದರಲ್ಲಿ ಉತ್ತರಕನ್ನಡ ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ಗೋಕರ್ಣದ ಪ್ರಸಿದ್ದ ಬೀಚ್ ನಲ್ಲಿ ಸಮುದ್ರದ ಸುಳಿಗೆ ಸಿಲುಕಿ ಮುಳುಗುತ್ತಿದ್ದ ಚಿತ್ರನಟ: ಜೀವ ಉಳಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ನೂತನ ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ಆಗಮಿಸಿದ‌ಪ್ರಭುಲಿಂಗ ಕವಳಿಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ,‌ಉತ್ತಮ‌ ಹೆಸರು ಮಾಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

Exit mobile version