Important
Trending

ರಸ್ತೆ ದಾಟುತ್ತಿದ್ದ ವೃದ್ಧ‌ ಮಹಿಳೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮಹಿಳೆ ದರ್ಮರಣ

ಕುಮಟಾ: ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು, ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಳ್ವೆಕೋಡಿ ಬಳಿ ಸಂಭವಿಸಿದೆ. ಕುಮಟಾ ತಾಲೂಕಿನ ಅಳ್ವೆಕೋಡಿ ನಿವಾಸಿ ದೇವಮ್ಮ ಬಾಬು ನಾಯ್ಕ ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.

ಜಿಲ್ಲಾಕಾರಾಗೃಹದ ಸಮೀಪ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿಯನ್ನು ತಳ್ಳಿ ತಪ್ಪಿಸಿಕೊಂಡು ಓಡಿಹೋದ ಆರೋಪಿ

ಹೊನ್ನಾವರ ಕಡೆಯಿಂದ ಕುಮಟಾ ಕಡೆ ಬರುತ್ತಿದ್ದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಸವಾರ ಚಿಕ್ಕಮಗಳೂರು ನಿವಾಸಿ ಎಂದು ತಿಳಿದುಬಂದಿದೆ. ತಲೆಗೆ ಗಂಭೀರ ಗಾಯವಾದ ಹಿನ್ನಲೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button