Important
Trending

ರಸ್ತೆ ದಾಟುವ ವೇಳೆ ಡಿಕ್ಕಿಹೊಡೆದ ಸಾರಿಗೆ ಬಸ್ : ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಅಂಕೋಲಾ: ಇತ್ತೀಚೆಗೆ ತಾಲೂಕಿನ ಅವರ್ಸಾ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾರಿಗೆ ಸಂಸ್ಥೆ ಬಸ್ ಬಡಿದು ಮಂಗಳೂರು ವೆನಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ತಾಲೂಕಿನ ಹಟ್ಟಿಕೇರಿ ನಿವಾಸಿ ಮಹಾಬಲೇಶ್ವರ ರಾಮಚಂದ್ರ ನಾಯ್ಕ (56) ಮೃತ ದುರ್ದೈವಿ.

ದೀಪಾವಳಿ ವಿಶೇಷ : ಗಮನಸೆಳೆದ ಹೊಂಡೆಯಾಟ: ಪಪ್ಪಾಯಿ ಕಾಯಿಯನ್ನು ಕವಣೆಯಲ್ಲಿಟ್ಟು ಎದುರಾಳಿಗೆ ಎಸೆತ

ಈತ ಅಕ್ಟೋಬರ್ 19 ರಂದು ಸಂಜೆ ಅವರ್ಸಾ ಕಾತ್ಯಾಯಿನಿ ದೇವಾಲಯದ ಮಹಾದ್ವಾರದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಂಕೋಲಾ ಕಡೆಯಿಂದ ಕಾರವಾರ ಕಡೆ ಸಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ, ಮತ್ತೊಂದು ವಾಹನಕ್ಕೆ ಓವರ್ ಟೇಕ್ ಮಾಡಿ ಬಂದು ,ವಾಹನದ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ದಾಟುತ್ತಿದ್ದ ಮಹಾಬಲೇಶ್ವರ ಅವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಲ್ಲಿಂದ ಮಂಗಳೂರು ವೆನಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಗುರುವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮಹಾಬಲೇಶ್ವರ ನಾಯ್ಕ ಮೃತ ಪಟ್ಟಿರುವುದಾಗಿ ಆಸ್ಪತ್ರೆಯಿಂದ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಅಂಕೋಲಾ ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೋಲೀಸರು ಕಾನೂನು ಕ್ರಮ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button