ಈಜಲು ತೆರಳಿದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಖಾಸಗಿ ಕಂಪೆನಿ ಉದ್ಯೋಗಿ ಸಾವು

ಗೋಕರ್ಣ : ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಇಲ್ಲಿನ ಕಡಲತೀರದಲ್ಲಿ ನಡೆದಿದೆ. ಮುಖ್ಯ ಕಡಲತೀರದ ರುದ್ರಪಾದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿoದ ನಾಲ್ವರು ಸ್ನೇಹಿತರು ಪ್ರವಾಸಕ್ಕೆ ಬಂದಿದ್ದು, ಈ ವೇಳೆ ಸಮುದ್ರದಲ್ಲಿ ಈಜಲು ತೆರಳಿದ್ದರು. ಈಜಲು ತೆರಳಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಅಭಿಷೇಕ (29) ಎಂಬವರು ಮೃತಪಟ್ಟಿದ್ದಾರೆ. ಸುಳಿಯಲ್ಲಿ ಸಿಲಿಕಿದ್ದ ಅಭಿಷೇಕ ಅವರನ್ನು ರಕ್ಷಿಸಲು ಲೈಫ್‌ಗಾರ್ಡ್ ಸಿಬ್ಬಂದಿ ಪ್ರಯತ್ನಿಸಿದೂ ಸಾಧ್ಯವಾಗಲಿಲ್ಲ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

Exit mobile version