ಜೊಯಿಡಾ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ತಾಲೂಕಿನ ಅನಮೋಡ ಅಬಕಾರಿ ಚೆಕ್‌ಪೋಸ್ಟ್ ಬಳಿ ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಸಾಗಾಟಕ್ಕೆ ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದ್ದು, ಇವುಗಳ ಮೊತ್ತ 13.35 ಲಕ್ಷ ಎಂದು ಅಂದಾಜಿಸಲಾಗಿದೆ. ಕಾರು ಚಾಲಕ ಮಧ್ಯಪ್ರದೇಶ ಮೂಲದ ವೈಭವ ಇಂದೋರ್‌ನನ್ನು ವಶಕ್ಕೆ ಪಡೆಯಲಾಗಿದೆ. ವಾಹನದ ಮಾಲೀಕನ್ನು ಪತ್ತೆ ಹಚ್ಚಲಾಗುತ್ತಿದೆ.
ವಿಸ್ಮಯ ನ್ಯೂಸ್, ಜೋಯ್ಡಾ