ಉತ್ತರಕನ್ನಡದ ಇಬ್ಬರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ: ಸರ್ಕಾರದ ಘೋಷಣೆ

ಒಟ್ಟು 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಖ್ಯಾತ ಯಕ್ಷಗಾನ ಭಾಗವತರಾಗಿರುವ ಕುಮಟಾ ತಾಲೂಕಿನ ಧಾರೇಶ್ವರದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಮಹಿಳೆಯ ಹೊಟ್ಟೆಯಲ್ಲಿತ್ತು ಬೃಹತ್ ಗಡ್ಡೆ: ಯಶಸ್ವಿ ಶಸ್ತ್ರಚಿಕಿತ್ಸೆ

ಇದೇ ವೇಳೆ ಮುಂಡಗೋಡು ತಾಲೂಕಿನ ಇಂದೂರಿನ ಜನಪದ ಕಲಾವಿದರು ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ಸಹದೇವಪ್ಪ ನಡಗೇರಿ ಅವರಿಗೂ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.ಒಟ್ಟು 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಇದರಲ್ಲಿ ಸೇರಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

Exit mobile version