ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18 ರಿಂದ 81 ಸಾವಿರ ವೇತನ ನೀಡಲಾಗುತ್ತದೆ. ಪೋಸ್ಟ್ ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಸೇರಿ ಒಟ್ಟು 88 ಹುದ್ದೆಗಳು ಖಾಲಿಯಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
India Post Recruitment 2022: ಅರ್ಜಿ ಸಲ್ಲಿಕೆ ಪ್ರಾರಂಭ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ನಿಂದ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು ಎಂದು ಮಾಹಿತಿ ನೀಡಲಾಗಿದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ನವೆಂಬರ್ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್‌ಗೆ ತೆರಳಿ ಈ ನೇಮಕಾತಿಯ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಕೆ ದಿನಾಂಕ | 25-10-2022 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | 22-11-2022 |
ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್