ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೋಲಿಸುವುದೇ ನನ್ನ ಗುರಿ: ವಿ.ಎಸ್.ಪಾಟೀಲ್

ಮುಂಡಗೋಡ: ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಮಾಜಿ ಶಾಸಕ ವಿ.ಎಸ್.ಪಾಟೀಲ ಚರ್ಚೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ ನೀಡಿದ್ದೇನೆ. ಪಕ್ಷದ ನಿಯಮಾವಳಿ ಪ್ರಕಾರ ಸೇರ್ಪಡೆ ಕಾರ್ಯಕ್ರಮ ಜರುಗಲಿದೆ ಎಂದು ಈ ವೇಳೆ ವಿಎಸ್ ಪಾಟೀಲ್ ತಿಳಿಸಿದ್ದಾರೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸೋಲಿಸುವುದೇ ನನ್ನ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಹನಿ ನಿರಾವರಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ: ಸದುಪಯೋಗ ಪಡೆದುಕೊಳ್ಳುವಂತೆ ಮನವಿ

ಅಲ್ಲದೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಕರೆದು ತಾಲೂಕಿನಲ್ಲಿಯೇ ಬೃಹತ್ ಸೇರ್ಪಡೆ ಕಾರ್ಯಕ್ರಮವನ್ನು ಏರ್ಪಡಿಸಲು ಉತ್ಸಕನಾಗಿದ್ದೇನೆ. ಮುಂಡಗೋಡನಲ್ಲಿ ಜರುಗುವ ಸೇರ್ಪಡೆ ಕಾರ್ಯಕ್ರಮಕ್ಕೆ ಬರುವ ನಾಯಕರು ಯಾವ ದಿನಾಂಕ ನೀಡುತ್ತಾರೆಯೋ ಗೊತ್ತಿಲ್ಲ. ನಾವು ಎಲ್ಲರೂ ಕೂಡಿಕೊಂಡು ಪಕ್ಷವನ್ನು ಬಲವಾಗಿ ಸಂಘಟಿಸೋಣ. ತಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಈ ವೇಳೆ ತಿಳಿಸಿದರು.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version