Focus News
Trending

ಬಿ.ಕಾಂ. ನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಕಾಂ. 6 ನೇ ಸಮಿಸ್ಟರ್‌ನ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಕಾಂ. 6 ನೇ ಸೆಮಿಸ್ಟರ್‌ನ 127 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ 94.48 ಫಲಿತಾಂಶ ದಾಖಲಾಗಿದೆ.

ರಾಚೆಲ್ ಮಚಾಡೋ 97.57%, ರಮ್ಯಾ ಹೆಗಡೆ 97.14% ಹಾಗೂ ಝಾಕಿರಾಬೇಗಂ ಆಸಿಫ್ 96.43% ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ವಿ. ಎಂ. ಭಂಡಾರಿ, ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button