Big NewsImportant
Trending

ನವಂಬರ್ 23 ರಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸನ್ಮಾನ: ಸುದ್ದಿಗೋಷ್ಠಿಯಲ್ಲಿ ಸನ್ಮಾನ ಸಮಿತಿಯ ಅಧ್ಯಕ್ಷರು

ಹೊನ್ನಾವರ: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನವಂಬರ್ 23 ರಂದು ಹೊನ್ನಾವರದಲ್ಲಿ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಸಾರ್ವಜನಿಕ ಸನ್ಮಾನ ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿಯ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದರು. ಹೊನ್ನಾವರ ಪಟ್ಟಣದ ಪ್ರವಾಸಿವಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸನ್ಮಾನ ಸಮಿತಿಯ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ಮಾತನಾಡಿ ವಿಧಾನ ಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನವಂಬರ್ 23 ರಂದು ಹೊನ್ನಾವರದಲ್ಲಿ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಸಾರ್ವಜನಿಕ ಸನ್ಮಾನ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಲಾ ಬಸ್ ಪಲ್ಟಿ: ಓರ್ವ ಮಹಿಳೆ ಸಾವು: 12 ಮಂದಿಗೆ ಗಾಯ

ಈ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುವರು. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಶಾಸಕರುಗಳಾದ ಸುನೀಲ್ ನಾಯ್ಕ ದಿನಕರ ಶೆಟ್ಟಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಪ್ರಮೋದ ಹೆಗಡೆ ಯಲ್ಲಾಪುರ ಮುಂತಾದವರು ಭಾಗವಹಿಸುವರು. ಹೊರನಾಡು ಕ್ಷೇತ್ರದ ಧರ್ಮಾಧಿಕಾರಿ ಭೀಮೇಶ್ವರ ಜೋಶಿಯವರು ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ, ಸಾರ್ವಜನಿಕರಿಗು ಸನ್ಮಾನಿಸಲು ಅವಕಾಶ ಕಲ್ಪಿಸಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ವಿನಂತಿಸಿಕೊoಡರು,

ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜು ಭಂಡಾರಿ ಮಾತನಾಡಿ ಪಕ್ಷಾತೀತವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಂಚಾಯತಿ ಸದಸ್ಯರನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸನ್ಮಾನ ಸಮಿತಿ ರಚಿಸಲಾಗಿದೆ. ವಿಧಾನ ಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸನ್ಮಾನ ಕಾರ್ಯಕ್ರಮವನ್ನು ಈ ಹಿಂದೆಯೇ ಯೋಜಿಸಲಾಗಿತ್ತು. ಅದರೆ ಕೋವಿಡ್ ಮತ್ತಿತರ ಕಾರಣಗಳಿಂದ ಆಯೋಜಿಸಲಾಗಿರಲಿಲ್ಲ ಎಂದು ತಿಳಿಸಿದರು.

ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ?

ಪತ್ರಿಕಾಗೋಷ್ಠಿಯಲ್ಲಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜು ಭಂಡಾರಿ, ಸನ್ಮಾನ ಸಮಿತಿಯ ಗೌರವಾಧ್ಯಕ್ಷ ಉಮೇಶ ನಾಯ್ಕ, ಸಂಚಾಲಕ ಗಣೇಶ ಪೈ, ಸನ್ಮಾನ ಸಮಿತಿಯ ಕಾರ್ಯದರ್ಶಿ ಎಂ.ಎಸ್.ಹೆಗಡೆ ಕಣ್ಣಿಮನೆ, ಶ್ರೀಕಾಂತ ಮೊಗೇರ, ರಘು ಪೈ, ಅರ್ಜುನ ರಾಯ್ಕರ, ಪಟ್ಟಣ ಪಂಚಾಯತ ಸದಸ್ಯ ವಿಜು ಕಾಮತ, ವಿಶ್ವನಾಥ ಗೊಂಡ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ಶ್ರೀಧರ ನಾಯ್ಕ ಹೊನ್ನಾವರ,

Related Articles

Back to top button