Important
Trending

ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತ: ನ್ಯಾಯಾಧೀಶರ ಸಾವು

ಕಾರವಾರ: ಕಳೆದ ಕೆಲವು ವರ್ಷಗಳ ಹಿಂದೆ ಕಾರವಾರದಲ್ಲಿ ಸಿಜೆಎಂ ಆಗಿ ಕರ್ತವ್ಯ ನಿರ್ವಹಿಸಿದ್ದ ಈಗ ಜಿಲ್ಲಾ ನ್ಯಾಯಾಧೀಶರಾಗಿದ್ದ ನಾಗಪ್ಪ ಎಂಬುವವರು ಗೋವಾಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೌದು, ಬಸ್ಸಿನಲ್ಲಿ ಕಾರವಾರದಿಂದ ಗೋವಾಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ. ಬಸ್ ಕೋಡಿಬಾಗದ ದಿವೇಕರ ಕಾಲೇಜು ಸಮೀಪ ಬಂದಾಗ ಅವರು ಕುಸಿದು ಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆಕಸ್ಮಿಕ ಬೆಂಕಿ ಅವಘಡ: ಹೊತ್ತಿ ಉರಿದ ಮನೆ : ಸುಟ್ಟು ಕರಕಲಾದ ವಸ್ತುಗಳು : ಲಕ್ಷಾಂತರ ಹಾನಿ

ನಾಗಪ್ಪ ಅವರು ಗೋವಾಕ್ಕೆ ಹೋಗಲು ಕಾರವಾರದಿಂದ ಬಸ್ ಹತ್ತಿದ್ದರು. ಈ ವೇಳೆ ಹೃದಯಾಘಾತವಾಗಿದೆ. ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಸಂಬoಧಪಟ್ಟವರಿಗೆ ತಿಳಿಸಿದ್ದಾರೆ. ಈ ಕುರಿತು ನಗರಠಾಣೆಯಲ್ಲಿ ದೂರು ದಾಖಲಾಗಿದೆ. ನಾಗಪ್ಪ ಅವರು ಈಗ ಜಿಲ್ಲಾ ನ್ಯಾಯಾಧೀಶರಾಗಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

Back to top button