ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಶಿವಾನಂದ ಹೆಗಡೆ ಕಡತೋಕಾ

ಕೆಪಿಸಿಸಿ 2023 ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಬಿ ಫಾರ್ಮ್ ಬಗ್ಗೆ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯಾದ್ಯಂತ ಹಲವು ಆಕಾಂಕ್ಷಿಗಳು ಕೆಪಿಸಿಸಿ ಕಛೇರಿಗೆ ಆಗಮಿಸಿ ಅರ್ಜಿ ಸಲ್ಲಿಸುತ್ತಿದ್ದು ಕುಮಟಾ ವಿಧಾನಸಭಾ ಕ್ಷೇತ್ರದಿಂದ ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಭಾಸ್ಕರ ಪಟಗಾರ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ಜಿ ಪರಮೇಶ್ವರ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ನಾಗಭೂಷಣ, ಎಲ್ ಎನ್ ಭಟ್, ಉದ್ಯಮಿ ನಾಗರಾಜ ಭಟ್ಟ, ದತ್ತಾತ್ರೇಯ ಶೆಟ್ಟಿ, ಬಾಲು ಭಂಡಾರಿ, ಕುಮಾರಿ ನೇಹಾ ಹೆಗಡೆ ಮತ್ತು ನಾಗರಾಜ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Exit mobile version