Important
Trending

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊನ್ನಾವರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಶರಾವತಿ ಸೇತುವೆ ಮೇಲೆ ನಡೆದಿದೆ. ಮುಂಜಾನೆ 1 ಗಂಟೆಯಿoದ 2 ಗಂಟೆಯ ನಡುವಿನ ಅವಧಿಯಲ್ಲಿ ಈ ದುರ್ಘಟನೆ ನಡೆದಿದೆ. ಶರಾವತಿ ಸೇತುವೆಯ ಮೇಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವನಿಗೆ ಅಪರಿಚಿತ ವಾಹನವೊಂದು ಅತಿವೇಗದಿಂದ ಬಂದು ಡಿಕ್ಕಿಹೊಡೆದು ಪರಾರಿಯಾಗಿದೆ.

ಅಘನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಘಟನೆಯಲ್ಲಿ ಇಲ್ಲಿನ ಬಜಾರ್ ರೋಡ್ ನಿವಾಸಗಿ ಕಾರ್ತಿಕ್ ಶೇಟ್ ಇವರ ತಲೆಯ ಭಾಗಕ್ಕೆ ಗಂಭೀರ ಗಾಯ ಸಂಭವಿಸಿದ ಕಾರಣ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

Related Articles

Back to top button