Focus NewsImportant
Trending

ಎರಡುದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಯಲ್ಲಾಪುರ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಗ್ರಾಮದ ಹೊರವಲಯದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ನಂದಿಗಟ್ಟ ಗ್ರಾಮದಲ್ಲಿ ನಡೆದಿದೆ. ಶವವಾಗಿ ಪತ್ತೆಯಾದ ವ್ಯಕ್ತಿಯನ್ನು ಮಬೂಬಸಾಬ ಅತ್ತಿವೇರಿ(47) ಎಂದು ಗುರುತಿಸಲಾಗಿದೆ. ಈತ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ. ಮನೆಯವರು, ಕುಟುಂಬದವರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇದೀಗ ಗ್ರಾಮದ ಬಳಿಯ ಕೆರೆಯಲ್ಲಿ ಈತನ ಶವ ಪತ್ತೆಯಾಗಿದ್ದಾನೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Related Articles

Back to top button