ಮಂಗಳೂರಿನಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು? ಆಟೋ ಸ್ಫೋಟದ ಹಿಂದೆ ಉಗ್ರ ಕೃತ್ಯದ ಕೈವಾಡ

ಮಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟ ಸಂಭವಿಸಿರುವುದು ಹಲವು ಅನುಮಾನ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಸ್ಫೋಟವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ತೀವ್ರಗೊಂಡಿದೆ. ಇದೇ ವೇಳೆ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಮಾಹಿತಿ ನೀಡಿದ್ದಾರೆ.

KMF Recruitment 2022: 487 ಹುದ್ದೆಗಳು: ಮಾಸಿಕ ವೇತನ 17 ಸಾವಿರದಿಂದ 99 ಸಾವಿರ

ಇನ್ನೊಂದೆಡೆ, ಬ್ಯಾಟರಿ, ವಯರ್, ನಟ್, ಬೋಲ್ಟ್, ಸರ್ಕ್ಯೂಟ್ ರೀತಿಯ ವಸ್ತುಗಳು ಕುಕ್ಕರ್‌ನಲ್ಲಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇದೊಂದು ಟೈಮರ್ ಬಾಂಬ್ ಎನ್ನವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಟೈಮರ್ ಸೆಟ್ ಮಾಡಿ ಬಾಂಬ್ ಸ್ಫೋಟ ಮಾಡಲು ಸಂಚು ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಸಂಬoಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡಿಜಿಪಿ ಪ್ರವೀಣ್ ಸೂದ್, ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಉಗ್ರ ಕೃತ್ಯವಾಗಿದೆ. ಸ್ಫೋಟದ ಸಂಭವಿಸಿದ ಸಂದರ್ಭದಲ್ಲಿ ಸುತ್ತಮುತ್ತಲೂ ಜನರು ಇಲ್ಲದ ಕಾರಣ ದೊಡ್ಡ ಹಾನಿಯೊಂದು ತಪ್ಪಿದಂತಾಗಿದೆ ಎಂದಿದ್ದಾರೆ.

ಘಟನೆಯ ವಿವರ: ನಾಗುರಿಯಲ್ಲಿ ಆಟೋ ರಿಕ್ಷಾ ಏರಿಪ್ಪ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ದಾರಿ ಮಧ್ಯೆ ದಿಢೀರ್ ನಿಗೂಢವಾಗಿ ಬೆಂಕಿ ಕಾಣಿಸಿಕೊಂಡು, ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿ ಹಾಗೂ ಆಟೋ ಚಾಲಕನಿಗೆ ಬೆಂಕಿ ತಗುಲಿದ್ದು, ಆಟೋ ಒಳಭಾಗ ಕೂಡ ಸುಟ್ಟು ಕರಕಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಶೇಕಡಾ 50 ರಷ್ಟು ದೇಹ ಸುಟ್ಟು ಹೋಗಿದೆ. ಆಧಾರ್ ಕಾರ್ಡ್ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ಹೆಸರಿನವಿಳಾಸವಿರುವುದು ಪತ್ತೆಯಾಗಿದೆ. ಆದರೆ ಇದು ನಕಲಿ ಐಡಿ ಕಾರ್ಡ್ ಎಂಬುದು ದೃಢಪಟ್ಟಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version