Focus NewsImportant
Trending

ನಿವೃತ್ತ ಯೋಧರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಬೇಡ್ಕಣಿಯ ಕೋಟೆ ಹನುಮಂತ ದೇವಾಲಯದ ಆಡಳಿತ ಸಮಿತಿ ಹಾಗೂ ಕೋಟೆ ಹನುಮಂತ ಪ್ರತಿಷ್ಠಾನದ ವತಿಯಿಂದ ವಿಶೇಷ ಸೇವಾಕರ್ತರು, ನಿವೃತ್ತ ಯೋಧರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಯ್ದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು . ಅಲ್ಲದೆ,. ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ನೀಡುವ ಯಕ್ಷಸಿರಿ ಪ್ರಶಸ್ತಿಗೆ ಭಾಜನರಾದ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣಾಜಿ ಬೇಡ್ಕಣಿ ಇವರನ್ನು ಕೋಟೆ ಹನುಮಂತ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ವಿಸ್ಮಯ ನ್ಯೂಸ್ ದಿವಾಕರ್ ಸಂಪಖoಡ ಸಿದ್ದಾಪುರ

Back to top button