Important
Trending

ಹವಾಮಾನ ವೈಪರೀತ್ಯ : ಹಾರದ ಹೆಲಿಕ್ಯಾಪ್ಟರ್ :ಕುಮಟಾಕ್ಕೆ ಬಾರದ ಸಿದ್ದರಾಮಯ್ಯ 

ಕುಮಟಾ/ ಅಂಕೋಲಾ: ಕುಮಟಾದಲ್ಲಿ ನಡೆಯಲಿರುವ ಜನ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದುಗೊಂಡಿರುವುದಾಗಿ ತಿಳಿದು ಬಂದಿದೆ. ಹವಾಮಾನ ವೈಪರಿತ್ಯದ ಕಾರಣ ಹೆಲಿಕಾಪ್ಟರ್ ಮೂಲಕ ತೆರಳುವುದು ಸಾಧ್ಯವಿಲ್ಲ ಎಂದು ಪೈಲೆಟ್ ವರದಿ ನೀಡಿರುವುದರಿಂದ ಮಾಜಿ ಮುಖ್ಯಮಂತ್ರಿಗಳು ಕುಮಟಾ ಪ್ರವಾಸ ರದ್ದು ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ತಂದೆಯ ಚಿತೆಗೆ ಅಗ್ನಿ ಸ್ಪರ್ಶ: ಸಂಪ್ರದಾಯಕ್ಕೆ ಕಟ್ಟುಬೀಳದೆ ಅಂತಿಮ ವಿಧಿವಿಧಾನ ನೆರವೇರಿಸಿದ ಮಗಳು

ಕುಮಟಾ ಮಣಕಿ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಮಟಾ ತಲುಪಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಕಾಪ್ಟರ್ ಮೂಲಕ ನೇರವಾಗಿ ಕುಮಟಾ ತಲುಪುವ ಕಾರ್ಯಕ್ರಮ ನಿಗದಿಯಾಗಿತ್ತು. ಕುಮಟಾದಲ್ಲಿ  ಹೆಲಿಕಾಪ್ಟರ್ ಲ್ಯಾಂಡಿಗ್ ಮಾಡಲು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೊದಲ ಪ್ರವಾಸ ಪಟ್ಟಿಯಂತೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ಕುಮಟಾ ತಲುಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು ನಂತರ ಪ್ರವಾಸ ಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕುಮಟಾ ತಲುಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅಂಕೋಲಾ ( ರಸ್ತೆ ಮಾರ್ಗವಾಗಿ ಹುಬ್ಬಳ್ಳಿ ತಲುಪಿ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರು ತಲುಪುವಂತೆ ಬದಲಾವಣೆ ಮಾಡಲಾಗಿತ್ತು.

ಇದೀಗ ಹವಾಮಾನ ವೈಪರಿತ್ಯದ ಕಾರಣ ಸಿದ್ದರಾಮಯ್ಯನವರು ಬೆಂಗಳೂರಿನಿಂದ ಹೊರಡದೇ ತಮ್ಮ ಕಾರ್ಯಕ್ರಮ ರದ್ದುಗೊಳಿಸಿರುವುದಾಗಿ ತಿಳಿದು ಬಂದಿದೆ. ಇದರಿಂದ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಪಕ್ಷದ ಸಾವಿರಾರು ಕಾರ್ಯಕರ್ತರಿಗೆ ಕೊಂಚ ನಿರಾಸೆ ಆದಂತಾಗಿದೆ .

ವಿಸ್ಮಯ ನ್ಯೂಸ ವಿಲಾಸ ನಾಯಕ್ ಅಂಕೋಲಾ

Back to top button