Railway Recruitment 2022: ರೈಲ್ವೆ ನೇಮಕಾತಿ: SSLC, PUC, ITI ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ನೈಋತ್ಯ ರೈಲ್ವೆ, ಒಟ್ಟು 13 ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಎಸೆಸೆಲ್ಸಿ, ಪಿಯುಸಿ, ಐಟಿಐ ಪಾಸ್ ಆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ 13 ಹುದ್ದೆಗಳಿಗೆ ಡಿಸೆಂಬರ್ 19ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 33 ವರ್ಷ ವಯಸ್ಸು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಧಿಸೂಚನೆಯ ಪ್ರಕಾರ ಖಾಲಿ ಇರುವ 13 ಸಾಂಸ್ಕೃತಿಕ, ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗಳದಲ್ಲಿ ಆಟವಾಡುತ್ತಿದ್ದ ಎರಡು ವರುಷದ ಮಗುವಿಗೆ ಹಾವು ಕಚ್ಚಿ ಸಾವು

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. 19-11-2022 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 19-12-2022 ಕೊನೆಯ ಎಂದು ನಮೂದಿಸಲಾಗಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಅಂಗವಿಕಲ, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಇಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂಪಾಯಿ ಮತ್ತು ಉಳಿದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿಗಾಗಿ ಅಧಿಸೂಚನೆ ಓದಿಬಹುದು.

ಒಟ್ಟು ಹುದ್ದೆಗಳು13
ವಿದ್ಯಾರ್ಹತೆSSLC, PUC, ITI
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಉದ್ಯೋಗ ಮಾಹಿತಿ ನೋಡಲುಇಲ್ಲಿ ಕ್ಲಿಕ್ ಮಾಡಿ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version