ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಪೋಲೀಸ್ ಮಕ್ಕಳ ಕ್ರೀಡಾಕೂಟ

ಶಿರಸಿ : ಉಪ ವಿಭಾಗದ ಪೋಲೀಸ್ ಮಕ್ಕಳ ಕ್ರೀಡಾಕೂಟ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ದೇವರಾಜ್ ಆರ್ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರು ಹೆಚ್ಚಿನ ಅಭಿಮಾನ ಮತ್ತು ನಂಬಿಕೆಯನ್ನು ಹೊಂದಿರುತ್ತಾರೆ. ಅಂತಹ ಅಭಿಮಾನ ನಂಬಿಕೆಯ ಉಳುವಿಗೆ ಕ್ರೀಡಾ ಚಟುವಟಿಕೆಯ ಮೂಲಕ ಶಾರೀರಿಕ ಸದೃಢತೆಯು ಅವಶ್ಯ ಕವಾಗಿದೆ. ಆದ್ದರಿಂದ ಇಲಾಖೆ ಕ್ರೀಡಾ ಚಟುವಟಿಕೆಯನ್ನು ಹಮ್ಮಿಕೊಂಡಿರುವುದು ಸಂತಸ ತಂದಿದೆ. ಕ್ರೀಡೆಯನ್ನು ಕ್ರೀಡಾ ಮನೋಭಾವನೆಯಿಂದ ಆಡಿ ಎಂದು ಕ್ರೀಡಾ ಪಟುಗಳಿಗೆ ಶುಭಕೋರಿದರು.

ಸಾಗವಾನಿ ಮರ ಕಡಿದು ಸಾಗಾಟ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್ಪಿ ರವಿ ಡಿ ನಾಯ್ಕ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಂತೆ ಶಿರಸಿ ಉಪವಿಭಾಗ ಮಟ್ಟದ ಪೊಲೀಸ್ ಮಕ್ಕಳ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದೆವೆ. ಪೊಲೀಸ್ ಕೆಲಸದ ಒತ್ತಡದಲ್ಲೂ ತಮ್ಮಕುಟುಂಬದೊAದಿಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಕೂಟಕ್ಕೆ ಅಧಿಕಾರಿಗಳು ಮೆರಗು ತಂದಿದ್ದಾರೆ. ಕ್ರೀಡಾಕೂಟದಲ್ಲಿ ಪೊಲೀಸರ ಮಕ್ಕಳು ಹೆಚ್ಚು ಪಾಲ್ಗೊಂಡು ಶಾರೀರಿಕ ಸದೃಢತೆಯ ಕಡೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐ ರಾಮಚಂದ್ರ ನಾಯಕ್ ಸೇರಿ ಶಿರಸಿ ಉಪ ವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಿದ್ದಾಪುರ ಠಾಣೆ ಪಿ ಐ ಕುಮಾರ ಕೆ. ಸ್ವಾಗತಿಸಿದರು. ಶಿರಸಿ ಗ್ರಾಮೀಣ ಠಾಣೆ ಪಿ ಎಸ್ ಐ ಈರಯ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 250 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Exit mobile version