ಕಾರವಾರ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳನ್ನ ತಡೆದು ಮಸಿ ಬಡಿದ ಶಿವಸೇನಾ ಕಾರ್ಯಕರ್ತರ ಕೃತ್ಯವನ್ನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉತ್ತರಕನ್ನಡ ಜಿಲ್ಲೆಯ ಕಾರವಾರ ಘಟಕ ಖಂಡಿಸಿದೆ. ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಮನವಿ ಮೂಲಕ ಖಂಡನೆ ವ್ಯಕ್ತಪಡಿಸಿರುವ ಕರವೇ ಕಾರ್ಯಕರ್ತರು ಕರ್ನಾಟಕದ ಬಸ್ಸುಗಳನ್ನ ತಡೆದು ಕಲ್ಲು ತೂರಾಟ ನಡೆಸಿ, ಕಪ್ಪು ಮಸಿ ಬಳಿಕ ಶಿವಸೇನಾ ಪುಂಡರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ಆರೋಪಿಗಳ ಬಂಧನ
ಇದು ಮತ್ತೆ ಪುನರಾವರ್ತನೆಯಾದಲ್ಲಿ ಕರ್ನಾಟಕಕ್ಕೆ ಬರುವ ಮಹಾರಾಷ್ಟ್ರ ನೋಂದಣಿಯ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಸಿದ್ದಾರೆ. ಅಲ್ಲದೇ ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿದ ಘಟನೆಗೆ ಸಂಬoಧಿಸಿದoತೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮೂಲಕ ಮನವಿ ಸಲ್ಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ