ನಿಯಂತ್ರಣ ತಪ್ಪಿದ ಬೈಕ್: ಲಾರಿಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಶಿರಸಿ: ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಇಲ್ಲಿನ ನಿಲೇಕಣಿ ಸಮೀಪದ ಭೀಮನಗುಡ್ಡ ಕ್ರಾಸ್ ಬಳಿ ನಡೆದಿದೆ. ಬೈಕ್ ಸವಾರ ಶಿರಸಿಯತ್ತ ಬರುತ್ತಿದ್ದ ವೇಳೆ ಮುಂದುಗಡೆಯಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಹೀಗಾಗಿ ಬೈಕ್ ಸವಾರ ನಿಯಂತ್ರ ತಪ್ಪಿ ಪಕ್ಕದಲ್ಲೇ ಚಲಿಸುತ್ತಿದ್ದ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ.

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ಆರೋಪಿಗಳ ಬಂಧನ

ಕೂಡಲೇ ಸ್ಥಳೀಯರು, ಸಾರ್ವಜನಿಕರು ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ಗೆ ರವಾನಿಸುತ್ತಿರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ಕಾನಸೂರು ಸಮೀಪದ ಅರಶಿನಗೋಡಿನ ನಾಗರಾಜ್ ದ್ಯಾವಪ್ಪ ಪಟಗಾರ ಎಂದು ಗುರುತಿಸಲಾಗಿದೆ. ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version