Big NewsImportant
Trending

ಪ್ರಸಿದ್ಧ ನಾಗಾರಾಧನೆ ತಾಣ ಶ್ರೀಕ್ಷೇತ್ರ ಮುಗ್ವಾದಲ್ಲಿ ವಿಜೃಂಭಣೆಯಿoದ ನಡೆದ ಚಂಪಾಷಷ್ಠಿ: ಸುಬ್ರಹ್ಮಣ್ಯನ ದರ್ಶನ ಪಡೆಯಲು ಹರಿದುಬಂದ ಜನಸಾಗರ

ಹೊನ್ನಾವರ: ಪುರಾಣ ಪ್ರಸಿದ್ಧ ಹಾಗೂ ನಾಗಾರಾಧನೆಯ ಪುಣ್ಯ ತಾಣ ಎಂದೇ ಪ್ರಸಿದ್ಧಿ ಹೊಂದಿರುವ ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿoದ ನೇರವೇರಿತು. ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಂದ ಹಣ್ಣು-ಕಾಯಿ ಸೇವೆ, ಅರ್ಚನೆ, ಆರತಿ, ಅಭಿಷೇಕ, ಸರ್ವ ಸೇವೆ, ಅಪೂಪ ಸೇವೆ, ಪಂಚಖಾದ್ಯ ಸೇವೆ, ಸೇರಿದಂತೆ ವಿವಿಧ ಸೇವೆಯನ್ನು ಸಲ್ಲಿಸಿದರು.

ಬೈಕ್‌ನ್ನು ನಿಲ್ಲಿಸಿ ಮೂತ್ರವಿಸರ್ಜನೆ ಮಾಡುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕಂಟೇನರ್: ವ್ಯಕ್ತಿ ಸ್ಥಳದಲ್ಲೇ ಸಾವು

ಸಮೀಪದ ನಾಗಬನದಲ್ಲಿರುವ ನಾಗ ದೇವರಿಗೆ ಕ್ಷೀರಾಭಿಷೇಕ, ಆರತಿ ಮತ್ತು ಫಲಾಭಿಷೇಕ ಸೇರಿದಂತೆ ವಿವಿಧ ಸೇವೆ ಸಲ್ಲಿಸಲಾಯಿತು. ಮುಂಜಾನೆ 6 ಗಂಟೆಯಿoದ ರಾತ್ರಿ 8 ಗಂಟೆಯ ವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ದರ್ಶನ ಪಡೆಯುವುದಕ್ಕಾಗಿ ಪೆಂಡಾಲ್ ವ್ಯವಸ್ಥೆ, ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದರು. ಅಪಾರ ಸಂಖ್ಯೆಯ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊoಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ದಂಪತಿ ಸಮೇತವಾಗಿ ಆಗಮಿಸಿ ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿದರು ನಂತರ ಮಾದ್ಯಮದವರೋಂದಿಗೆ ಮಾತನಾಡಿ ಈ ಕ್ಷೇತ್ರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಭಕ್ತವೃದವನ್ನು ಹೋಂದಿದೆ, ಇಂದು ನಡೆಯುವ ಚಂಪಾಸೃಷ್ಟಿ ಉತ್ಸವಕ್ಕೆ ಜಿಲ್ಲೆ ಹಾಗೂ ರಾಜ್ಯದ ಮೂಲೆಯಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ, ಇಲ್ಲಿಗೆ ಆಗಮಿಸುವ ಭಕ್ತರಿಗೆ ಆಡಳಿತ ಕಮಿಟಿ ಸಕಲ ವ್ಯವಸ್ಥೆಮಾಡಿದೆ ಎಂದರು,

ದೇವಾಲಯದ ಆಡಳಿತ ಕಮಿಟಿಯ ಅಧ್ಯಕ್ಷರಾದ ಎಸ್.ಆರ್.ಹೆಗಡೆ ಮಾತನಾಡಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಎಂದು ಪ್ರಶಿದ್ದಿ ಪಡೆದಿದೆ, ಈ ಕ್ಷೇತ್ರವನ್ನು ದಕ್ಷೀಣ ನಾಸಿಕ ಕ್ಷೇತ್ರ ಎಂದು ಕರೆಯುತ್ತಾರೆ, ಪ್ರತಿ ಬಾರಿಯಂತೆ ಸಕಲ ಸಿದ್ದತೆಯೊಂದಿಗೆ ಅದ್ದೂರಿಯಾಗಿ ಚಂಪಾಷಷ್ಠಿ ಉತ್ಸವ ನಡೆಯುತ್ತಿದ್ದು, ವಿವಿಧ ಸೇವಾ ಕಾರ್ಯಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರಿಗೆ ಸೇವಾ ಕೌಂಟರ್ ತೆರೆದು ಮಾಹಿತಿ ನೀಡಲಾಗುತ್ತಿದೆ. ಪಾನಕ ಸೇವೆ, ಮಧ್ಯಾಹ್ನ ನಂತರ ರಾತ್ರಿಯವರೆಗೂ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತ ಹಾಗೂ ತಾಲೂಕ ಆಡಳಿತ ಮತ್ತು ಪೊಲೀಸ್ ಇಲಾಖೆಯ ಜೊತೆಗೆ ವಿವಿಧ ಸಂಘಟನೆಯವರು ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು,

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Related Articles

Back to top button