ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿರುವವರಿಗೊಂದು ಶುಭಸುದ್ದಿ. ಕೇಂದ್ರೀಯ ವಿದ್ಯಾಲಯ ಸಂಘಟನೆಯು ಸುಮಾರು 13 ಸಾವಿರಕ್ಕೂ ಅಧಿಕ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. 35 ಸಾವಿರದಿಂದ ಆರಂಭವಾಗುವ ಮಾಸಿಕ ವೇತನ ಹುದ್ದೆಗಳಿಗೆ ಅನುಗುಣವಾಗಿ 2 ಲಕ್ಷದ ವರೆಗೂ ಇದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಕೆವಿಎಸ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
India Post Recruitment 2022: ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ: ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಅರ್ಜಿಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯದಿನವಾಗಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆಯಿoದ ಕೆವಿಎಸ್ ಪ್ರಾಥಮಿಕ ಪದವೀಧರ ಶಿಕ್ಷಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಸ್ನಾತಕೋತ್ತರ ಶಿಕ್ಷಕರು, ಪಿಆರ್‌ಟಿ ಸಂಗೀತ, ಸಹಾಯಕ ಪ್ರಾಂಶುಪಾಲರoತಹ ಬೋಧಕ ಹುದ್ದೆಗಳು ಸೇರಿ ಹಲವು ಬೋಧಕೇತರ ಹುದ್ದೆಗಳು ಸೇರಿದಂತೆ ಒಟ್ಟು 13,404 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ.
ಒಟ್ಟು ಹುದ್ದೆಗಳು | 13,404 |
ಪ್ರಾಥಮಿಕ ಶಿಕ್ಷಕರು | 6,164 |
TGT | 3,176 |
PGT | 1,409 |
ಪ್ರಾಥಮಿಕ ಶಿಕ್ಷಕ (ಸಂಗೀತ) | 303 |
ಗ್ರಂಥಪಾಲಕರು | 355 |
ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಹೀಗೆ ವಿವಿಧ ಹಂತದಲ್ಲಿ ನಡೆಯಲಿದೆ. ಪ್ರತಿ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ವಿಧಾನವನ್ನು ಅನುಸರಿಸಿ.
ಕೇಂದ್ರೀಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆಯಿರಿ. ಅಲ್ಲದೆ, ಉದ್ಯೋಗಾವಕಾಶದ ಕುರಿತು ಇನ್ನಷ್ಟು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ. ವಿವಿಧ ಹುದ್ದೆಗಳಿಗೆ ನೇರವಾಗಿ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್