Follow Us On

WhatsApp Group
Focus News
Trending

ವೀರಭದ್ರ ಸಹಿತ ಗೌರಿ ಶಂಕರ ದೇವಾಲಯದ ವಾರ್ಷಿಕ ಮಹಾರಥೋತ್ಸವ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ವೀರಭದ್ರ ಸಹಿತ ಗೌರಿ ಶಂಕರ ದೇವಾಲಯ ಐಸೂರ್ ನಲ್ಲಿ ವಾರ್ಷಿಕ ಮಹಾರಥೋತ್ಸವ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿoದ ಜರುಗಿತು. ಪ್ರಯುಕ್ತವಾಗಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಭಕ್ತರು ದೇವರಿಗೆ ಕುಂಕುಮರ್ಚನೆ, ಮಹಾಮಂಗಳಾರತಿ, ಹಣ್ಣುಕಾಯಿ ಸೇವೆ ಸಲ್ಲಿಸಿದರು ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು ರಥೋತ್ಸವದ ಪ್ರಯುಕ್ತ ದೇವಾಲಯ ದಲ್ಲಿ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು ರಥ ಎಳೆಯುವ ಸಂದರ್ಭದಲ್ಲಿ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಸ್ಮಯ ನ್ಯೂಸ್ ದಿವಾಕರ್ ಸಂಪಖoಡ ಸಿದ್ದಾಪುರ

Back to top button