SSC Recruitment: ಕೇಂದ್ರ ಸರ್ಕಾರಿ ಉದ್ಯೋಗ: 4,500 ಹುದ್ದೆಗಳು ಖಾಲಿ: PUC ಪಾಸ್ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್ ಸೆಲೆಕ್ಷನ್ ಕಮಿಷನ್, ಒಟ್ಟು 4,500 ಗ್ರೂಫ್ ಸಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 18 ರಿಂದ 27 ವರ್ಷದ ಒಳಗಿನ ಪಿಯುಸಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಲೋವರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್( ಮಾಸಿಕ ಸಂಬಳ: 19,990 ರಿಂದ 63,200 ) ಡಾಟಾ ಎಂಟ್ರಿ ಆಪರೇಟರ್( ಮಾಸಿಕ ಸಂಬಳ: 25,500 ರಿಂದ 81,100 ) ಡಾಟಾ ಎಂಟ್ರಿ ಆಪರೇಟರ್ ಗ್ರೇಡ್ ‘ಎ’ ಹುದ್ದೆಗೆ ( ಮಾಸಿಕ ವೇತನ: 25,500 ರಿಂದ 81,100 ) ನಿಗದಿಪಡಿಸಲಾಗಿದೆ.

KVS Recruitment 2022: ಭರ್ಜರಿ ಉದ್ಯೋಗಾವಕಾಶ: 13 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: 35 ಸಾವಿರದಿಂದ 2 ಲಕ್ಷದ ವರೆಗೆ ಮಾಸಿಕ ವೇತನ

ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 4 ಕೊನೆಯ ದಿನಾಂಕವಾಗಿದೆ. ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದ್ದು, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಭಾರತದಾದ್ಯಂತ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100, ಎಸ್‌ಇ, ಎಸ್‌ಟಿ, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆನ್‌ಲೈನ್ ಅಥವಾ ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕವೇತನ ರೂ.19900-63200/-
ಡೇಟಾ ಎಂಟ್ರಿ ಆಪರೇಟರ್ವೇತನ ರೂ.25500-92300/-
ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ ‘A’ವೇತನ ರೂ.25500-81100/-
ಅರ್ಜಿ ಸಲ್ಲಿಸಲು ಪ್ರಾರಂಭ06- 12-2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನ04-01-2023

8 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ. ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟಿಗೆ ಭೇಟಿ ನೀಡಿ ಪರಿಶೀಲಿಸಬಹುದು. ನೇಮಕಾತಿ ಅಧಿಸೂಚನೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ. ಅಲ್ಲದೆ, ಇನ್ನು ಹೆಚ್ಚಿನ ಉದ್ಯೋಗದ ಕುರಿತು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version