ಡಿಸೆಂಬರ್ 14 ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ: ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಅಧಿಕಾರಿಗಳು, ಅತಿಥಿ ಗಣ್ಯರು ಭಾಗಿ

ಅಂಕೋಲಾ: ಕಾರವಾರ (ಉ.ಕ) ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು 14 ಡಿಸೆಂಬರ್ 2022 ರ ಬುಧವಾರ ಅಂಕೋಲಾ ತಾಲೂಕಿನ ಸ್ಪಾತಂತ್ರ್ಯ ಸಂಗ್ರಾಮ ಸ್ಮಾರಕ ಭವನದಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಾರ್ಯಾಲಯ ಉಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ  ಆಶ್ರಯದಲ್ಲಿ 2022- 23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಆಯೋಜಿಸಲಾಗಿದೆ. 

ಒಂದುವರೆ ಸಾವಿರ ರೂಪಾಯಿ ಮದ್ಯದ ಆಸೆಗೆ ಬಿದ್ದು ಪೊಲೀಸರ ಅತಿಥಿಯಾದ ಯುವಕರು

ಉ ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು,ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಘನ ಉಪಸ್ಥಿತಿಯಲ್ಲಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಗೌರವ ಉಪಸ್ಥಿತರಿರಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ, ಶಾಸಕರುಗಳಾದ ಆರ್.ವಿ.ದೇಶಪಾಂಡೆ, ಬಸವರಾಜ ಹೊರಟ್ಟಿ, ಎಸ್. ವಿ.ಸಂಕನೂರು, ದಿನಕರ ಶೆಟ್ಟಿ, ಸುನೀಲ ನಾಯ್ಕ, ಶಾಂತಾರಾಮ ಸಿದ್ಧಿ, ಗಣಪತಿ ಉಳ್ವೇಕರ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್. ಹೆಗಡೆ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ,  ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ತಾ.ಪಂ ಆಡಳಿತಾಧಿಕಾರಿ ನಾಗೇಶ ರಾಯ್ಕರ ಆಗಮಿಸಲಿದ್ದು, ವಿಶೇಷ ಆಮಂತ್ರಿತರಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠ ವಿಷ್ಣುವರ್ಧನ್ ಎನ್, ಜಿ.ಪಂ  ನೂತನ ಕಾರ್ಯನಿರ್ವಹಣ ಅಧಿಕಾರಿ ಈಶ್ವರಕುಮಾರ, ಶಿಕ್ಷಣ ಇಲಾಖೆ ಅಪರ ಆಯುಕ್ತ ಜಯಶ್ರೀ ಶಿಂತ್ರಿ ಪಾಲ್ಗೊಳಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version