Join Our

WhatsApp Group
Important
Trending

ಬೈಕ್‌ಗೆ ಡಿಕ್ಕಿ ಹೊಡೆದ ಟಾಟಾ ಏಸ್: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಶಿರಸಿ: ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯ ಕರಿಗುಂಡಿ ರಸ್ತೆಯ ಬಳಿ ನಡೆದಿದೆ. ನಾರಾಯಣ ಮುತ್ತಯ್ಯ ಮೊಗೆರ ಮೃತ ಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಈತ ಕರಿಗುಂಡಿ ರಸ್ತೆಯ ಮಾರ್ಗವಾಗಿ ಕಸ್ತೂರಬಾ ನಗರದ ಕಡೆಗೆ ಹೋಗುತ್ತಿದ್ದಾಗ ಎದುರಿಗೆ ಗಡೆಯಿಂದ ಟಾಟಾ ಎಸ್ ವಾಹನದ ಚಾಲಕ, ತನ್ನ ವಾಹನವನ್ನು ಅತಿವೇಗವಾಗಿ ಹಾಗೂ ನಿಷ್ಕಾಳಜಿ ತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿಪಡಿಸಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರಿನಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾನೆ,

ವಿಸ್ಮಯ ನ್ಯೂಸ್, ಶಿರಸಿ

Back to top button