Join Our

WhatsApp Group
Focus NewsImportant
Trending

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ಬಾವಿಗೆ ಹಾರಿ ಸಾವಿಗೆ ಶರಣು

ಶಿರಸಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ತಾಲೂಕಿನ ಕೊಳಗಿಬೀಸಿನಲ್ಲಿ ನಡೆದಿದೆ. ಇಲ್ಲಿನ ರೋಟರಿ ಆಸ್ಪತ್ರೆ ಸಮೀಪ ಪಂಚರ್ ಶಾಪ್ ಹೊಂದಿದ್ದ ಮಂಜುನಾಥ ಗೌಡ (45) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ತನಗಿದ್ದ ಅನಾರೋಗ್ಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button