ಕೇಂದ್ರ ರೈಲ್ವೆ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2422 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ಗಳಿಂದ 10ನೇ ತರಗತಿ, ಐಟಿಐ, ಅಥವಾ 12ನೇ ತರಗತಿ ಪೂರ್ಣಗೊಳಿಸಿರಬೇಕು ಎಂದು ಉಲ್ಲೇಖಿಸಲಾಗಿದೆ.
SSC Recruitment: ಕೇಂದ್ರ ಸರ್ಕಾರಿ ಉದ್ಯೋಗ: 4,500 ಹುದ್ದೆಗಳು ಖಾಲಿ: PUC ಪಾಸ್ ಆದವರು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಕೇಂದ್ರ ರೈಲ್ವೆಯ ಅಧಿಕೃತ ವೆಬ್‌ಸೈಟಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷಗಳು ಮತ್ತು ಗರಿಷಠ 24 ವರ್ಷಗಳನ್ನು ಹೊಂದಿರಬೇಕಿದೆ.
ಅರ್ಜಿ ಸಲ್ಲಿಕೆ ಪ್ರಾರಂಭ | 15-12-2022 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 15-01-2023 |
ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಉದ್ಯೋಗ ಕುರಿತ ಮಾಹಿತಿಗಾಗಿ | ಇಲ್ಲಿ ಕ್ಲಿಕ್ ಮಾಡಿ |
ಸೆಂಟ್ರಲ್ ರೈಲ್ವೆಯ ಅಧಿಕೃತ ಅಧಿಸೂಚನೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ. ಅಲ್ಲದೆ, ಸೆಂಟ್ರಲ್ ರೈಲ್ವೆಯ ಅಧಿಕತ ವೆಬ್‌ಸೈಟಿಗೆ ತೆರಳಿ ಹೆಚ್ಚಿನ ಮಾಹಿತಿಯನ್ನು ಪರಿಶೀಲಿಸಬಹುದು. ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ. ಮೆಟ್ರಿಕ್ಯುಲೇಷನ್‌ನಲ್ಲಿ ಶೇಕಡಾವಾರುಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,