ನಿದ್ರೆಗೆ ಜಾರಿದ ಚಾಲಕ: ಏಕಾಏಕಿ ಅಂಗಡಿಗೆ ನುಗ್ಗಿದ ಲಾರಿ

ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ಹೆದ್ದಾರಿ ಪಕ್ಕದಲ್ಲಿರುವ ಅಂಗಡಿಗೆ ನುಗ್ಗಿದ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ತಡರಾತ್ರಿ ತಾಲೂಕಿನ ಮಿರ್ಜಾನದ ರಾಷ್ಟಿçÃಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಕೋಲಾದಿAದ ಕುಮಟಾ ಕಡೆ ಬರುತ್ತಿದ್ದ ವಾಹನ ಸಾಗಿಸುವ ಲಾರಿಯು ಚಾಲಕನ ನಿಯಂತ್ರಣ ತಪ್ಪಿ, ಏಕಾಏಕಿ ಅಂಗಡಿಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿ ಚಾಲಕ ನಿದ್ರೆಗೆ ಜಾರಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version