Focus News
Trending

ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ರಾಮಾಂಜನೇಯ ಭಜನಾ ಮಂಡಳಿ ಕೆಳಗಿನ ಕಂದವಳ್ಳಿ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜರುಗಿದ ರಾಜ್ಯಮಟ್ಟದ ಭಜನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೆಳಗಿನ ಕಂದವಳ್ಳಿಯ ರಾಮಾಂಜನೇಯ ಭಜನಾ ಮಂಡಳಿಯ ಹಾಲಕ್ಕಿ ಸಮಾಜ ಬಾಂಧವರು ಸಾಂಪ್ರದಾಯಿಕ ಹಿಮ್ಮೇಳದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ನಮ್ಮ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಪ್ರಥಮ ಸ್ಥಾನ ಪಡೆದ ರಾಮಾಂಜನೇಯ ಭಜನಾ ಮಂಡಳಿ ತಂಡವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾಗಿರುವ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ಶ್ರೀಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಶಾಖಾಮಠದ ಪೂಜ್ಯರಾದ ಸದ್ಗರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಅಭಿನಂದಿಸಿ, ಆಶೀರ್ವದಿಸಿದರು.

ನಡುರಸ್ತೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯಸರ ಕದ್ದಿದ್ದ ಆರೋಪಿ ಅಂದರ್ : ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ರಾಜ್ಯ ಮಟ್ಟದ ಭಜನಾ ಸ್ಪರ್ಧೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಕಳುಹಿಸಿ, ಅಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟ ಮಿರ್ಜಾನ್‌ ಶಾಖಾಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯರಿಗೆ ಹಾಗೂ ಶ್ರೀಮಠದ ಎಲ್ಲಾ ಪೂಜ್ಯರಿಗೆ ಕೆಳಗಿನ ಕಂದವಳ್ಳಿಯ ರಾಮಾಂಜನೇಯ ಭಜನಾ ಮಂಡಳಿಯ ಹಾಲಕ್ಕಿ ಸಮಾಜ ಬಾಂಧವರು ಭಕ್ತಿಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button