ಪರೇಶಮೇಸ್ತ ಸಾವಿನ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು: ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆಯ ಪ್ರಮೋದ ಮುತಾಲಿಕ್ ಆಗ್ರಹ

ಹೊನ್ನಾವರ: ಬಿಜೆಪಿಗೆ ಮಾನವೀಯತೆ ಕಿಂಚಿತ್ತಾದರೂ ಇದ್ದರೆ ಮುಖ್ಯಮಂತ್ರಿಗಳು ಪರೇಶ ಮೇಸ್ತ ಸಾವಿನ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಿನ ಜಿಲ್ಲಾಧಿಕಾರಿ ಹಾಗೂ ಪೋಸ್ಟಮಾರ್ಟಮ್ ಮಾಡಿದ ಮಣಿಪಾಲದ ವೈದ್ಯರನ್ನು ಪ್ರತಿವಾದಿ ಮಾಡಬೇಕು ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು ಅವರು ಹೊನ್ನಾವರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು,

ನಡುರಸ್ತೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯಸರ ಕದ್ದಿದ್ದ ಆರೋಪಿ ಅಂದರ್ : ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ಹೊನ್ನಾವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಪರೇಶ ಮೇಸ್ತ ಸಾವಿನ ಪ್ರಕರಣವನ್ನು ತಕ್ಷಣ ಮುಖ್ಯಮಂತ್ರಿಗಳು ಮರುತನಿಖೆಗೆ ಒಪ್ಪಿಸದಿದ್ದರೆ ಉತ್ತರ ಕನ್ನಡ ಜಿಲ್ಲೆಯ ಐವರೂ ಬಿಜೆಪಿ ಶಾಸಕರ ಮನೆಯೆದುರು ಶ್ರೀರಾಮಸೇನೆ ಕಾರ್ಯಕರ್ತರು ಧರಣಿ ನಡೆಸಿ ಮರ್ಯಾದೆ ಹರಾಜು ಹಾಕುತ್ತೇವೆ ಎಂದು ಎಚ್ಷರಿಸಿದರು.

ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಪ್ರಮೋದ ಮುತಾಲಿಕ ಹೇಳಿದರು. ಶ್ರೀರಾಮಸೇನೆ ವತಿಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳ ಹಾಗೂ ಹಳಿಯಾಳ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆಯ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ, ರಾಜು ನಾಯ್ಕ ಭಟ್ಕಳ, ಮಾರುತಿ ಮಡಿವಾಳ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ಶ್ರೀಧರ ನಾಯ್ಕ ಹೊನ್ನಾವರ.

Exit mobile version