Big NewsImportant
Trending

ಕಾರು, ಬಸ್‌ ಹಾಗೂ ಬೈಕ್ ನಡುವೆ ಸರಣಿ ಅಪಘಾತ:  ಬಸ್ ಅಡಿ ಚಕ್ರಕ್ಕೆ ಸಿಲುಕಿ ಓರ್ವ ಸಾವು: ಇಬ್ಬರು ಮಕ್ಕಳಿಗೆ ಗಾಯ

ಕಾರವಾರ: ಕಾರು, ಬಸ್‌ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ‌ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕ. ಈತ ಮಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ ಎನ್ನಲಾಗಿದೆ. ಈ ವೇಳೆ ಬೈಕ್, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತವಾಗಿದೆ.

ಕಿಟಕಿ ಒಡೆದು ತಡರಾತ್ರಿ ಅಂಗಡಿಗೆ ನುಗ್ಗಿ ಕಳ್ಳತನ :ಕಳ್ಳನ ಚಹರೆ ಸಿಸಿಟಿವಿಯಲ್ಲಿ ಸೆರೆ

ಅಪಘಾತದ ರಭಸಕ್ಕೆ  ಬೈಕ್ ಸವಾರ ಬಸ್ ಅಡಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ಈತನ ಜೊತೆ ಇದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಕೂಡ ಬಸ್ ಗೆ ಗುದ್ದಿದ ಕಾರಣ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Related Articles

Back to top button