Focus NewsImportant
Trending

ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಾವು: ಹೆಚ್ಚುತ್ತಿದೆ ಪ್ರವಾಸಿಗರ ಸಾವಿನ ಸಂಖ್ಯೆ

ಭಟ್ಕಳ: ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಮುದ್ರ ಪಾಲಾದ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಮಹಮ್ಮದ್ ಫಾಝಿಲ್ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದು ಚಿತ್ರದುರ್ಗದಿಂದ ಮರುಡೇಶ್ವರಕ್ಕೆ ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ತಂಡ ಗೆಳೆಯರ ಜೊತೆ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ.

ದೇವಸ್ಥಾನದ ಪಕ್ಕದ ಹಳೆ ಅಂಗಡಿ ಮುಂದೆ ವ್ಯಕ್ತಿಯೋರ್ವನ  ಶವ ಪತ್ತೆ

ಸುಮಾರು ಒಂದು ಗಂಟೆಗಳ ಕಾಲ ಹುಡುಕಾಟದ ಬಳಿಕ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಲೈಫ್ ಗಾರ್ಡ್ಗಳ ನಿರ್ಲಕ್ಷ್ಯದಿಂದಲೇ ಬಾಲಕನ ಸಾವಾಗಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದು , ಜನರಿಗೆ ಸೂಚನೆ ನೀಡುವ, ರಕ್ಷಣೆ ಮಾಡುವ ಬದಲು ಬೋಟಿಂಗ್‌ನಲ್ಲಿ ಲೈಫ್ ಗಾರ್ಡ್ಗಳು ನಿರತರಾಗಿದ್ದರು. ಹೀಗಾಗಿ ದುರಂತ ಸಂಭವಿಸಿದೆ ಎಂದು ದೂರಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ , ಭಟ್ಕಳ

Back to top button