ImportantJob News
Trending

Recruitment 2022: ಕೇಂದ್ರ ಸರ್ಕಾರಿ ಉದ್ಯೋಗ : 400 ಉದ್ಯೋಗಾವಕಾಶ

ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಶುಭಸುದ್ದಿ. ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲಲ್ಲಿ ಖಾಲಿ ಇರುವ 400 ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊಸ ಅಧಿಸೂಚನೆ ಪ್ರಕಾರ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ 10 ಸಾವಿರ, ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ ಹುದ್ದೆಗಳಿಗೆ 8 ಸಾವಿರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 7 ಸಾವಿರ ಹಾಗು ಫೀಲ್ಡ್ ಆಫೀಸರ್‌ಗಳಿಗೆ 60 ಸಾವಿರ ವೇತನವನ್ನು ನಿಗದಿಪಡಿಸಲಾಗಿದೆ.

Railway Recruitment 2022: ಒಟ್ಟು 2422 ಹುದ್ದೆಗಳಿಗೆ ನೇಮಕಾತಿ: SSLC, ITI, PUC ಆದವರು ಅರ್ಜಿ ಸಲ್ಲಿಸಬಹುದು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ, ಡಿಪ್ಲೊಮಾ, ಬಿಇ , ಬಿಟೆಕ್ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಬಳಿಕ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಹಾಗು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 10, 2023 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿರುತ್ತದೆ. ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100 /- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿoಗ್ ಮೂಲಕ ಪಾವತಿಸಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ ಎಂದು ತಿಳಿದುಬಂದಿದೆ.

ಒಟ್ಟು ಹುದ್ದೆಗಳು400
ವೇತನಶ್ರೇಣಿ60 ಸಾವಿರದ ವರೆಗೆ
ಅರ್ಜಿ ಸಲ್ಲಿಸಲುಈ ಲಿಂಕ್ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ

Job News, Latest Job News , ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Related Articles

Back to top button