Follow Us On

WhatsApp Group
Focus NewsImportant
Trending

40 ಲಕ್ಷ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನ: ಉಚಿತವಾಗಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ

ಸಾಧನೆಗೈದ 10 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ವಿದ್ಯಾಭ್ಯಾಸ

ಭಾರತದ ಉಜ್ವಲ ಭವಿಷ್ಯಕ್ಕೆ ಕೊಡುಗೆ ನೀಡುವ ಪ್ರಯತ್ನದಲ್ಲಿ ಶಾರದ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯು ಮುಂದಿನ ತಲೆಮಾರಿನ ಬುದ್ದಿವಂತ ಮನಸ್ಸುಗಳನ್ನು ಪೋಷಿಸುವ ಕಾಯಕಲ್ಪವನ್ನು ಆರಂಭಿಸಿದೆ. ಇದರ ಅಂಗವಾಗಿ ಪ್ರತಿಭಾ ಪ್ರವೀಣ ಎನ್ನುವ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕ ದಿವಂಗತ ಶ್ರೀ ಹರಿದಾಸ ಆಚಾರ್ಯರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದೆ.

ಇದರ ಯೋಜನೆಯಂತೆ ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸುವ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ 10 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ವಿದ್ಯಾಭ್ಯಾಸ ಹಾಗೂ ಉಳಿದ ಹತ್ತು ಮಕ್ಕಳಿಗೆ 50% ಮತ್ತು ಇನ್ನುಳಿದ 10 ಮಕ್ಕಳಿಗೆ ಶೇಕಡ 25% ಶುಲ್ಕ ಕಡಿತ ಮಾಡಿ ವಿದ್ಯಾಭ್ಯಾಸವನ್ನು ಒದಗಿಸುವ ಮಹತ್ವಕಾಂಕ್ಷೆಯನ್ನು ಹೊಂದಿದೆ. ಅಂತೆಯೇ ಇದುವರೆಗೆ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು, ಇದು ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಒಂದು ಆಶಾಕಿರಣ ಯೋಜನೆಯಾಗಿದೆ. ಶೇಕಡಾ ನೂರರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಉಚಿತವಾಗಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.. ಕುಮಟಾ, ಬೈಂದೂರಿನಲ್ಲಿ ಅರ್ಹತಾ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ಸಂಪರ್ಕಿಸಬೇಕಾದ ಸಂಖ್ಯೆ: 7022437688, 9019730478.

ವಿಸ್ಮಯ ನ್ಯೂಸ್, ಕುಮಟಾ

Back to top button