Join Our

WhatsApp Group
Focus NewsImportant
Trending

ಕಂಟೇನರ್ ಹರಿದು ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸಾವು

ಹೊನ್ನಾವರ; ಕಂಟೇನರ್ ಮತ್ತು ಬೈಕ್ ಅಪಘಾತ ಸಂಭವಿಸಿ ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಪಟ್ಟಣದ ಕರ್ನಲ್ ಹಿಲ್ ಸಮೀಪ ನಡೆದಿದೆ.ಪಟ್ಟಣದ ಗಾಂಧಿನಗರ ವಾಸವಾಗಿದ್ದ ಸಾವಿತ್ರಿ ಭಟ್(56) ಮಹಿಳೆ ಮೃತಪಟ್ಟ ದುರ್ದೈವಿ. ಮೃತ ಮಹಿಳೆಯು ಬಿ.ಎಸ್.ಎನ್.ಎಲ್. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪಘಾತದಿಂದ ಮಹಿಳೆಯ ನೆಲಕ್ಕೆ ಬಿದ್ದ ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹೊನ್ನಾವರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಮಹಿಳೆಯ ಶವವನ್ನು ತಾಲೂಕಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೂ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button