ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಶುಭಸುದ್ದಿ. ಹೌದು, ಆದಾಯ ತೆರಿಗೆ ಇಲಾಖೆಯು ಒಟ್ಟು 72 ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಪದವಿ ಮತ್ತು 10ನೇ ತರಗತಿ ಪಾಸಾದ ಅರ್ಹ ಅಭ್ಯರ್ಥಿಗಳು ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ತೆರಿಗೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಲಿಖಿತ ಪರೀಕ್ಷೆ ಮತ್ತು ಸಂರ್ದಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಸಿಕ ವೇತನ 34 ಸಾವಿರದ ವರೆಗೆ ಇದೆ ಎಂದು ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 6 ಕೊನೆಯ ದಿನಾಂಕವಾಗಿದೆ.
ಒಟ್ಟು ಹುದ್ದೆಗಳು | 72 |
ಆದಾಯ ತೆರಿಗೆ ಇನ್ಸ್ಪೆಕ್ಟರ್- 28 ಹುದ್ದೆಗಳು | ವಿದ್ಯಾರ್ಹತೆ: ಪದವಿ |
ತೆರಿಗೆ ಸಹಾಯಕ- 28 ಹುದ್ದೆಗಳು | ವಿದ್ಯಾರ್ಹತೆ: ಪದವಿ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ ವಿದ್ಯಾರ್ಹತೆ | 10ನೇ ತರಗತಿ |
ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟಿಗೆ ತೆರಳಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ. ಅಲ್ಲದೆ, ಉದ್ಯೋಗದ ಕುರಿತ ಮತ್ತಷ್ಟು ಮಾಹಿತಿ ಪಡೆದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್