ImportantJob News
Trending

Recruitment : SSLC ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ: 72 ಹುದ್ದೆಗಳಿಗೆ ನೇಮಕಾತಿ: 34 ಸಾವಿರದ ವರೆಗೆ ಮಾಸಿಕ ವೇತನ

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಶುಭಸುದ್ದಿ. ಹೌದು, ಆದಾಯ ತೆರಿಗೆ ಇಲಾಖೆಯು ಒಟ್ಟು 72 ಆದಾಯ ತೆರಿಗೆ ಇನ್​ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಪದವಿ ಮತ್ತು 10ನೇ ತರಗತಿ ಪಾಸಾದ ಅರ್ಹ ಅಭ್ಯರ್ಥಿಗಳು ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ತೆರಿಗೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂರ್ದಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಸಿಕ ವೇತನ 34 ಸಾವಿರದ ವರೆಗೆ ಇದೆ ಎಂದು ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 6 ಕೊನೆಯ ದಿನಾಂಕವಾಗಿದೆ.

ಒಟ್ಟು ಹುದ್ದೆಗಳು72
ಆದಾಯ ತೆರಿಗೆ ಇನ್​​ಸ್ಪೆಕ್ಟರ್- 28 ಹುದ್ದೆಗಳುವಿದ್ಯಾರ್ಹತೆ: ಪದವಿ
ತೆರಿಗೆ ಸಹಾಯಕ- 28 ಹುದ್ದೆಗಳುವಿದ್ಯಾರ್ಹತೆ: ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ ವಿದ್ಯಾರ್ಹತೆ10ನೇ ತರಗತಿ

ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟಿಗೆ ತೆರಳಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ. ಅಲ್ಲದೆ, ಉದ್ಯೋಗದ ಕುರಿತ ಮತ್ತಷ್ಟು ಮಾಹಿತಿ ಪಡೆದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button