Focus NewsImportant
Trending

ಮಿರ್ಜಾನಿನ ಬಿಜಿಎಸ್‌ ಕೇಂದ್ರೀಯ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್, ಕುಮಟಾದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ (ರಾಷ್ಟ್ರೀಯ ಯುವದಿನಾಚರಣೆ) ಆಚರಿಸಲಾಯಿತು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿಯವರು ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಅನೇಕ ನಿದರ್ಶನಗಳ ಮೂಲಕ ತಿಳಿಸಿದರು. ಶಿಕ್ಷಕಿ ಭಾರತಿ ನಾಯ್ಕ ಸ್ವಾಮಿ ವಿವೇಕಾನಂದರ ಜೀವನ ಮತ್ತು ಅವರ ಉತ್ಕೃಷ್ಠ ಸಾಧನೆಗಳ ಬಗ್ಗೆ, ಅವರ ಬೋಧನೆಗಳ ಬಗ್ಗೆ ಉಪನ್ಯಾಸ ನೀಡಿದರು. ಶಿಕ್ಷಣ
ಸಂಯೋಜಕರಾದ ಗೀತಾ ನಾಯ್ಕ, ಸೌಭಾಗ್ಯ ಬಾಳೇರಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಶೀಧರ ಹೆಚ್.‌ ಆರ್.‌ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕುಮಾರಿ ಅನನ್ಯಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕ ಸಂದೀಪ ನಾಯ್ಕ ಸ್ವಾಗತಿಸಿದರು. ಕುಮಾರಿ ಸೃಷ್ಟಿ ರಾಷ್ಟ್ರೀಯ ಯುವದಿನಾಚರಣೆಯ ಬಗ್ಗೆ ತುಂಬಾ ಸೊಗಸಾಗಿ ಭಾಷಣ ಮಾಡಿದಳು. ದಿಗಂತ ಸಂಗಡಿಗರು ಹಾಗೂ ಶುಭಾಂಗಿ ಸಂಗಡಿಗರು ಸ್ವಾಮಿ ವಿವೇಕಾನಂದರ ಕುರಿತು ಗೀತೆಯನ್ನು ಹಾಡಿದರು. ಶಿಕ್ಷಕ ರಮೇಶ ವಿ. ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೀಮಾ ಡಿಸೋಜ ವಂದಿಸಿದರು.

ವಿಸ್ಮಯ ನ್ಯೂಸ್, ಕುಮಟಾ

Back to top button