Follow Us On

WhatsApp Group
Focus NewsImportant
Trending

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಟು ವರ್ಷದ ಗಂಡು ಚಿರತೆ ಸಾವು

ಕುಮಟಾ: ಅಪರಿಚಿತ ವಾಹನ ಡಿಕ್ಕಿಯಾಗಿ ಎಂಟು ವರ್ಷದ ಗಂಡು ಚಿರತೆ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬರ್ಗಿ ಗ್ರಾಮದ ಸಮೀಪದ ಬೆಟ್ಕುಳಿ ಬಳಿ ನಡೆದಿದೆ. ಅಪಘಾತದಲ್ಲಿ ಚಿರತೆಹ ಹೊಟ್ಟೆಯ ಭಾಗಕ್ಕೆ ದೊಡ್ಡ ಹೊಡೆತ ಬಿದ್ದಿದ್ದು ಚಿರತೆ ಒದ್ದಾಡಿ ಪ್ರಾಣ ಬಿಟ್ಟಿರುವ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರೆಗುತ್ತಿ ಅರಣ್ಯ ವಿಭಾಗದ ಆರ್.ಎಫ್.ಓ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಕುಮಟಾದ ಪಶು ವೈದ್ಯಕೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button