ಲೈಫ್ ಇನ್ಷೂರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ದಲ್ಲಿ ಒಟ್ಟು 8,345 ಹುದ್ದೆಗಳು ಖಾಲಿಯಿದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಐಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ ಪೂರ್ತಿಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದ್ದು, 35 ಸಾವಿರದಿಂದ 90 ಸಾವಿರದ ವರೆಗೆ ಮಾಸಿಕ ವೇತನ ನಿಗದಿಯಾಗಿದೆ. ಅಭ್ಯರ್ಥಿಗಳು 21 ವರ್ಷಗಳ ವಯಸ್ಸಿನ ಮಿತಿಯನ್ನು ಪೂರ್ಣಗೊಳಿಸಿರಬೇಕು ಮತ್ತು 30 ವರ್ಷಗಳ ವಯಸ್ಸಿನ ಮಿತಿಯನ್ನು ಮೀರಬಾರದು.
ಹೌದು, ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂಪಾಯಿ 35650 ರಿಂದ 90205 ಸಂಬಳ ನಿಗದಿಯಾಗಿದೆ. ಅರ್ಜಿಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ : ರೂ.750/-ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : ರೂ.100/- ಶುಲ್ಕವಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಇಲಾಖೆ | LIC |
ಒಟ್ಟು ಹುದ್ದೆಗಳು | 8345 |
ಅರ್ಜಿ ಸಲ್ಲಿಸುವ ಬಗೆ | Online |
ಹುದ್ದೆಗಳ ಹೆಸರು | ಅಭಿವೃದ್ಧಿ ಅಧಿಕಾರಿ |
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 10 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಾರಂಭ: | 21 -01-2023 |
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: | 10-02-2023 |
ಅರ್ಜಿ ಸಲ್ಲಿಕೆ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆಯ ಲಿಂಕ್ | ಓದಲು ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್