ನದಿಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಸಿಕ್ಕಿದ್ದ ಅಪರಿಚಿತ ಮಹಿಳೆ ಚಿಕಿತ್ಸೆ ಫಲಿಸದೆ ಸಾವು: ಗುರುತು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಕಾರವಾರ: ಕಾಳಿ ಸೇತುವೆಯ ಬಳಿ ನದಿಯ ನೀರಿನಲ್ಲಿ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಸಿಕ್ಕ ಸುಮಾರು 40 ರಿಂದ 45 ವರ್ಷದ ಅಪರಿಚಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತಳ ಪರಿಚಯ ಅಥವಾ ಗುರುತು ಇದ್ದವರು ಶಹರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವoತೆ ಪೊಲೀಸ್ ನಿರೀಕ್ಷಕರು ಕೋರಿದ್ದಾರೆ.

ಕಳೆದ ಜನವರಿ 26 ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಕೋಡಿಬಾಗ ಕಾಳಿ ಸೇತುವೆಯ ಬಳಿ ಕಾಳಿ ನದಿಯ ನೀರಿನಲ್ಲಿ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯನ್ನು ಕಾಳಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಅಳವೇವಾಡದ ಮೀನುಗಾರರು ರಕ್ಷಣೆ ಮಾಡಿ, ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದರು. ಆದರೆ, ಮಹಿಳೆಯು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ.

ಈ ಮಹಿಳೆಯ ಹೆಸರು ವಿಳಾಸದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಈ ಮಹಿಳೆಯ ಹೆಸರು, ವಿಳಾಸದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಮೃತ ಅಪರಿಚಿತ ಮಹಿಳೆಯ ಬಗ್ಗೆ, ಆಕೆಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version